
ಇಂದೇಕೋ ಈ ಸಂಜೆ ಎಲ್ಲಾ ಸಂಜೆಗಳಂತೆನಿಸದೆ
ಕೊನೆಯ ಕಿರಣದವರೆಗೂ ನಾನು ಕಾದಂತೆ
ನಿನ್ನ ನೆನಪು ಒತ್ತರಿಸಿ ಬರುತಿರುವುದೇಕೆ?
ಪ್ರಾಣ ತೆಗೆಯುವ ನೋವಿನಂತೆ ನರನಾಡಿಗಳನ್ನೆಲ್ಲಾ ಆವರಿಸುತ್ತಾ...
ಸೂತ್ರ ಹರಿದ ಗಾಳಿಪಟದಂತೆನಿಸುತಿದೆ
ನನ್ನ ಮನಸು ನನ್ನ ಅಣತಿಗೂ ಕಾಯದೆ
ಕೈತಪ್ಪಿ ಓಡಿದ ಮೀನಿನಂತೆ
ನಿನ್ನನ್ನು ಹುಡುಕುತ್ತಾ ನಿನ್ನ ನಗುವಿನ ಲಯವನ್ನು ಅರಸುತ್ತಾ...
ನೀನು ಆಚೆ ತೀರದ ಅರಳುತಿರುವ ಹೂವು
ನಾನು ಬೇಸರದ ಬಾನಿನಲ್ಲಿ ಮಿನುಗುತಿರುವ ಒಂಟಿ ನಕ್ಷತ್ರ...
6 comments:
ನೀನು ಆಚೆ ತೀರದ ಅರಳುತಿರುವ ಹೂವು
ನಾನು ಬೇಸರದ ಬಾನಿನಲ್ಲಿ ಮಿನುಗುತಿರುವ ಒಂಟಿ ನಕ್ಷತ್ರ...
ಚೆನ್ನಾಗಿದೆ ಸರ್ :))) ಹೂವಿನ ಬದಲು ಸೂರ್ಯ ಮಾಡಬಹುದೇನೋ .
"ನೀನು ಆಚೆ ತೀರದ ಅರಳುತಿರುವ ಹೂವು
ನಾನು ಬೇಸರದ ಬಾನಿನಲ್ಲಿ ಮಿನುಗುತಿರುವ ಒಂಟಿ ನಕ್ಷತ್ರ..."
ತುಂಬ ಸುಂದರವಾದ ಸಾಲುಗಳು!
ಕವನವೇ ಇಡಿಯಾಗಿ ಕಾಡುವುದು ನಿಜವಾದರೂ.. ಮೊದಲ ಪಾರ ಬಹು ಪ್ರಿಯವಾಗುತ್ತದೆ....ಚಂದದ ಕವನ...
super......:)
Beautiful lines!! :-)
ಸುಂದರ ಕವಿತೆ...ಹತಾಶೆ ಯ ಚಿತ್ರಣ ಚೆನ್ನಾಗಿ ಮೂಡಿಬಂದಿದೆ.
Post a Comment